KSPDO B GRADE

ಸಂಘ / Association
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು
Karnataka State PDO B-Grade Upgradation Association (R), Bengaluru
ನೋಂದಣಿ ಸಂಖ್ಯೆ: DRB4/SOR/420/2023-24
Registration Number: DRB4/SOR/420/2023-24
ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ
Registered under Karnataka Co-operative Societies Act, 1960
ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ
State President: Sri Ramesh Nadageri
ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್
State Vice-President: Sri Jayagouda Patil
ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ
Women Vice-President: Smt. Sridevi Madiwalar

Live

MENU BAR

ಜಿಲ್ಲಾಧ್ಯಕ್ಷರು
1. ಬೆಂಗಳೂರು ನಗರ: ಶ್ರೀ ಧನಂಜಯ್ [ಬೆಂಗಳೂರು ವಿಭಾಗ]
2. ಬೆಂಗಳೂರು ಗ್ರಾಮಾಂತರ: ಶ್ರೀ ಸತೀಶ್ [ಬೆಂಗಳೂರು ವಿಭಾಗ]
3. ರಾಮನಗರ: ಶ್ರೀ ರವಿ.ಎನ್ [ಬೆಂಗಳೂರು ವಿಭಾಗ]
4. ಕೋಲಾರ: ಶ್ರೀ ಮೊಹನ್ ಕುಮಾರ್ [ಬೆಂಗಳೂರು ವಿಭಾಗ]
5. ಚಿಕ್ಕಬಳ್ಳಾಪೂರ: ಶ್ರೀ ಚಂದ್ರಶೇಖರ.G.W [ಬೆಂಗಳೂರು ವಿಭಾಗ]
6. ತುಮಕೂರು: ಶ್ರೀ ಜುಂಜೇಗೌಡ [ಬೆಂಗಳೂರು ವಿಭಾಗ]
7. ಶಿವಮೊಗ್ಗ: ಶ್ರೀ ಚಿದಾನಂದ [ಬೆಂಗಳೂರು ವಿಭಾಗ]
8. ದಾವಣಗೆರೆ: ಶ್ರೀ ಜಯಕುಮಾರ್‌ ಡಿ.ಆರ್ [ಬೆಂಗಳೂರು ವಿಭಾಗ]
9. ಚಿತ್ರದುರ್ಗ: ಶ್ರೀ ನಾಗರಾಜ ಜಿ [ಬೆಂಗಳೂರು ವಿಭಾಗ]
10. ಮೈಸೂರು: ಶ್ರೀ ಗೋಪಾಲ ಕೃಷ್ಣಾ [ಮೈಸೂರು ವಿಭಾಗ]
11. ಮಂಡ್ಯ: ಶ್ರೀ ಲವ. ಎನ್ [ಮೈಸೂರು ವಿಭಾಗ]
12. ಹಾಸನ: ಶ್ರೀ ಮಂಜುನಾಥ [ಮೈಸೂರು ವಿಭಾಗ]
13. ಚಾಮರಾಜನಗರ: ಶ್ರೀ ಸಿದ್ಧರಾಜು [ಮೈಸೂರು ವಿಭಾಗ]
14. ದಕ್ಷಿಣ ಕನ್ನಡ: ಶ್ರೀ ಮುತ್ತಪ್ಪ [ಮೈಸೂರು ವಿಭಾಗ]
15. ಉಡುಪಿ: ಶ್ರೀ ಗೀರಿಶ್ [ಮೈಸೂರು ವಿಭಾಗ]
16. ಚಿಕ್ಕಮಗಳೂರು: ಶ್ರೀ ವಿಶ್ವನಾಥಯ್ಯ [ಮೈಸೂರು ವಿಭಾಗ]
17. ಕೊಡಗು: ಶ್ರೀ ಪುಟ್ಟರಾಜು [ಮೈಸೂರು ವಿಭಾಗ]
18. ಬೆಳಗಾವಿ: ಶ್ರೀ ರವಿಕಾಂತ್ CM [ಬೆಳಗಾವಿ ವಿಭಾಗ]
19. ಧಾರವಾಡ: ಶ್ರೀ ಪರುಶುರಾಮ ಕವಲೂರು [ಬೆಳಗಾವಿ ವಿಭಾಗ]
20. ವಿಜಯಪುರ: ಶ್ರೀ ಬಸನಗೌಡ ಚೌದ್ರಿ [ಬೆಳಗಾವಿ ವಿಭಾಗ]
21. ಬಾಗಲಕೋಟೆ: ಶ್ರೀ ಸಿದ್ಧು ಬಿರದಾರ [ಬೆಳಗಾವಿ ವಿಭಾಗ]
22. ಗದಗ: ಶ್ರೀ ಸಂತೋಷ ಹೆಚ್‌ [ಬೆಳಗಾವಿ ವಿಭಾಗ]
23. ಹಾವೇರಿ: ಶ್ರೀ ಭೋಜರಾಜ [ಬೆಳಗಾವಿ ವಿಭಾಗ]
24. ಉತ್ತರ ಕನ್ನಡ: ಶ್ರೀ ಗೀರಿಶ್ [ಬೆಳಗಾವಿ ವಿಭಾಗ]
25. ಕಲಬುರ್ಗಿ: ಶ್ರೀ ರಾಜೇಶ್ವರಿ ಸಾಹು [ಕಲಬುರ್ಗಿ ವಿಭಾಗ]
26. ಬೀದರ್: ಶ್ರೀ ಚಂದ್ರಶೇಖರ ಬನ್ನಾಳೆ [ಕಲಬುರ್ಗಿ ವಿಭಾಗ]
27. ರಾಯಚೂರು: ಶ್ರೀ‌ ಸಿ.ಹೆಚ್ ಮುದಕಪ್ಪ [ಕಲಬುರ್ಗಿ ವಿಭಾಗ]
28. ಕೊಪ್ಪಳ: ಶ್ರೀ ವಿರೇಶ್.G.A [ಕಲಬುರ್ಗಿ ವಿಭಾಗ]
29. ಯಾದಗಿರಿ: ಶ್ರೀ ಮಲ್ಲಣ್ಣ ಮಾಳೂರು [ಕಲಬುರ್ಗಿ ವಿಭಾಗ]
31. ವಿಜಯನಗರ: ಶ್ರೀ ನವೀನಕುಮಾರ್ ಆರ್‌ ಡಿ [ಕಲಬುರ್ಗಿ ವಿಭಾಗ]

Search This Blog

21 November 2025

ಸರ್ವೋಚ್ಚ ನ್ಯಾಯಾಲಯವು ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ!


ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು.

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್‌ನ ದಾಸ್ತಾನು (Stock) ಇರಿಸಿಕೊಳ್ಳಬೇಕು.

ರೇಬೀಸ್ಅ‌‌ನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರೆ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್‌ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ ಚಿಕಿತ್ಸೆಯನ್ನು ಉಚಿತ ನೀಡತಕ್ಕದ್ದು.

ಈ ರೀತಿಯ ಪ್ರಕರಣಗಳು ಬಂದಾಗ ಸರ್ಕಾರಿ/ಖಾಸಗಿ ಆಸ್ಪತ್ರೆಗಳು ತಕ್ಷಣದ ವೈದ್ಯಕೀಯ ಸ್ಕ್ರೀನಿಂಗ್ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಸಮಯಪ್ರಜ್ಞೆಯಿಂದ ನಿರ್ವಹಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ  ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು.

ನಾಯಿ/ಹಾವು ಕಡಿತದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆದರೆ ಆಸ್ಪತ್ರೆಗಳು SAST ಯೋಜನೆಯಡಿಯಲ್ಲಿ ನಿಗದಿಪಡಿಸಿರುವ ಮೊತ್ತ ಪಡೆದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು.

ನಾಯಿ,ಹಾವು ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳಾದರೆ, ಸಂಬಂಧಿತ ವೈದ್ಯಾಧಿಕಾರಿ/ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಅಥವಾ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ.‌

No comments:

Post a Comment